ಮಲಾಕಿ 3:11-12
ಮಲಾಕಿ 3:11-12 KSB
“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆಗ ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು. ಏಕೆಂದರೆ ನೀವು ರಮ್ಯವಾದ ದೇಶವಾಗುವಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.