ಮಲಾಕಿ 3:17-18
ಮಲಾಕಿ 3:17-18 KSB
“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.