1
ಆದಿಕಾಂಡ 3:6
ಕನ್ನಡ ಸಮಕಾಲಿಕ ಅನುವಾದ
ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.
Sammenlign
Udforsk ಆದಿಕಾಂಡ 3:6
2
ಆದಿಕಾಂಡ 3:1
ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.
Udforsk ಆದಿಕಾಂಡ 3:1
3
ಆದಿಕಾಂಡ 3:15
ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”
Udforsk ಆದಿಕಾಂಡ 3:15
4
ಆದಿಕಾಂಡ 3:16
ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”
Udforsk ಆದಿಕಾಂಡ 3:16
5
ಆದಿಕಾಂಡ 3:19
ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”
Udforsk ಆದಿಕಾಂಡ 3:19
6
ಆದಿಕಾಂಡ 3:17
ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.
Udforsk ಆದಿಕಾಂಡ 3:17
7
ಆದಿಕಾಂಡ 3:11
ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.
Udforsk ಆದಿಕಾಂಡ 3:11
8
ಆದಿಕಾಂಡ 3:24
ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.
Udforsk ಆದಿಕಾಂಡ 3:24
9
ಆದಿಕಾಂಡ 3:20
ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.
Udforsk ಆದಿಕಾಂಡ 3:20
Hjem
Bibel
Læseplaner
Videoer