1
ಯೋಹಾನನ ಸುವಾರ್ತೆ 4:24
ಪರಿಶುದ್ದ ಬೈಬಲ್
ದೇವರು ಆತ್ಮಸ್ವರೂಪಿ. ಆದ್ದರಿಂದ ದೇವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು” ಎಂದು ಹೇಳಿದನು.
Vergleichen
Studiere ಯೋಹಾನನ ಸುವಾರ್ತೆ 4:24
2
ಯೋಹಾನನ ಸುವಾರ್ತೆ 4:23
ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ.
Studiere ಯೋಹಾನನ ಸುವಾರ್ತೆ 4:23
3
ಯೋಹಾನನ ಸುವಾರ್ತೆ 4:14
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.
Studiere ಯೋಹಾನನ ಸುವಾರ್ತೆ 4:14
4
ಯೋಹಾನನ ಸುವಾರ್ತೆ 4:10
ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.
Studiere ಯೋಹಾನನ ಸುವಾರ್ತೆ 4:10
5
ಯೋಹಾನನ ಸುವಾರ್ತೆ 4:34
ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.
Studiere ಯೋಹಾನನ ಸುವಾರ್ತೆ 4:34
6
ಯೋಹಾನನ ಸುವಾರ್ತೆ 4:11
ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.
Studiere ಯೋಹಾನನ ಸುವಾರ್ತೆ 4:11
7
ಯೋಹಾನನ ಸುವಾರ್ತೆ 4:25-26
ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”) ಆಗ ಯೇಸು, “ಆತನೇ ಈಗ ನಿನ್ನೊಂದಿಗೆ ಮಾತಾಡುತ್ತಿದ್ದಾನೆ. ನಾನೇ ಮೆಸ್ಸೀಯ” ಎಂದು ಹೇಳಿದನು.
Studiere ಯೋಹಾನನ ಸುವಾರ್ತೆ 4:25-26
8
ಯೋಹಾನನ ಸುವಾರ್ತೆ 4:29
“ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.
Studiere ಯೋಹಾನನ ಸುವಾರ್ತೆ 4:29
Home
Bibel
Lesepläne
Videos