1
ಲೂಕ 8:15
ಕನ್ನಡ ಸತ್ಯವೇದವು J.V. (BSI)
ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.
Σύγκριση
Διαβάστε ಲೂಕ 8:15
2
ಲೂಕ 8:14
ಬೇರೆ ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವಮಾನದಲ್ಲಿ ಆಗುವ ಚಿಂತೆ ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಮಾಗಿಸುವದಿಲ್ಲ; ಇವರೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವರು.
Διαβάστε ಲೂಕ 8:14
3
ಲೂಕ 8:13
ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದುಹೋಗುತ್ತಾರೆ; ಇವರೇ ಬಂಡೆಯ ನೆಲವಾಗಿರುವವರು.
Διαβάστε ಲೂಕ 8:13
4
ಲೂಕ 8:25
ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರಾದರೋ ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಅತ್ಯಾಶ್ಚರ್ಯಪಟ್ಟರು.
Διαβάστε ಲೂಕ 8:25
5
ಲೂಕ 8:12
ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದು ಬಿಡುತ್ತಾನೆ; ಇವರೇ ದಾರಿಯ ಮಗ್ಗುಲಾಗಿರುವವರು.
Διαβάστε ಲೂಕ 8:12
6
ಲೂಕ 8:17
ಪ್ರಕಾಶಕ್ಕೆ ಬಾರದ ಯಾವ ರಹಸ್ಯವೂ ಇಲ್ಲ; ಮತ್ತು ಗೊತ್ತಾಗದೆ ಬೈಲಿಗೆ ಬಾರದೆ ಇರುವಂಥ ಗುಟ್ಟು ಒಂದೂ ಇಲ್ಲ.
Διαβάστε ಲೂಕ 8:17
7
ಲೂಕ 8:47-48
ಆ ಹೆಂಗಸು ತಾನು ಮರೆಯಾಗಿಲ್ಲವೆಂತ ತಿಳಿದು ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ತಾನು ಇಂಥ ಕಾರಣದಿಂದ ಈತನನ್ನು ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂತಲೂ ಎಲ್ಲಾ ಜನರ ಮುಂದೆ ತಿಳಿಸಿದಳು. ಆತನು ಆಕೆಗೆ - ಮಗಳೇ ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು ಎಂದು ಹೇಳಿದನು.
Διαβάστε ಲೂಕ 8:47-48
8
ಲೂಕ 8:24
ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ಸಾಯುತ್ತೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಉಬ್ಬುವ ನೀರನ್ನೂ ಗದರಿಸಿದನು. ಗದರಿಸಲು ಅವು ನಿಂತವು, ಶಾಂತವಾಯಿತು.
Διαβάστε ಲೂಕ 8:24
Αρχική
Αγία Γραφή
Σχέδια
Βίντεο