1
ಲೂಕ 9:23
ಕನ್ನಡ ಸತ್ಯವೇದವು J.V. (BSI)
ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ದಿನಾಲೂ ಹೊತ್ತುಕೊಂಡು ನನ್ನ ಹಿಂದೆ ಬರಲಿ.
Σύγκριση
Διαβάστε ಲೂಕ 9:23
2
ಲೂಕ 9:24
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.
Διαβάστε ಲೂಕ 9:24
3
ಲೂಕ 9:62
ಯೇಸು ಅವನಿಗೆ - ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನು ಹಾಕಿ ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲವೆಂದು ಹೇಳಿದನು.
Διαβάστε ಲೂಕ 9:62
4
ಲೂಕ 9:25
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
Διαβάστε ಲೂಕ 9:25
5
ಲೂಕ 9:26
ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.
Διαβάστε ಲೂಕ 9:26
6
ಲೂಕ 9:58
ಆತನು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.
Διαβάστε ಲೂಕ 9:58
7
ಲೂಕ 9:48
ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.
Διαβάστε ಲೂಕ 9:48
Αρχική
Αγία Γραφή
Σχέδια
Βίντεο