“ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು. ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ, ಕಳ್ಳರು ಕನ್ನಕೊರೆದು ಕದಿಯುವುದಿಲ್ಲ. ನಿಮ್ಮ ಭಂಡಾರ ಎಲ್ಲಿರುವುದೋ ಅಲ್ಲೇ ನಿಮ್ಮ ಮನಸ್ಸಿರುವುದು.