ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು. ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.