ಮತ್ತಾಯ 6:19-21
ಮತ್ತಾಯ 6:19-21 KSB
“ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು. ಆದರೆ ಪರಲೋಕದಲ್ಲಿ ನಿಮಗಾಗಿ ನಿಕ್ಷೇಪವನ್ನು ಕೂಡಿಟ್ಟುಕೊಳ್ಳಿರಿ, ಅಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದಿಲ್ಲ. ಕಳ್ಳರು ಕನ್ನ ಕೊರೆದು ಕದಿಯುವುದಿಲ್ಲ. ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.