Logo de YouVersion
Icono de búsqueda

ಆದಿಕಾಂಡ 6:1-4

ಆದಿಕಾಂಡ 6:1-4 KANCLBSI

ಮಾನವಕುಲವು ಜಗದ ಮೇಲೆ ಹಬ್ಬಿಹರಡಿದಂತೆ ಅವರಿಗೆ ಹೆಣ್ಣುಮಕ್ಕಳು ಹುಟ್ಟಿದರು. ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು. ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು. ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು.