1
ಆದಿಕಾಂಡ 4:7
ಪರಿಶುದ್ದ ಬೈಬಲ್
ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.
Comparar
Explorar ಆದಿಕಾಂಡ 4:7
2
ಆದಿಕಾಂಡ 4:26
ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.
Explorar ಆದಿಕಾಂಡ 4:26
3
ಆದಿಕಾಂಡ 4:9
ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.
Explorar ಆದಿಕಾಂಡ 4:9
4
ಆದಿಕಾಂಡ 4:10
ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.
Explorar ಆದಿಕಾಂಡ 4:10
5
ಆದಿಕಾಂಡ 4:15
ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.
Explorar ಆದಿಕಾಂಡ 4:15
Inicio
Biblia
Planes
Videos