1
ಲೂಕ 10:19
ಕನ್ನಡ ಸತ್ಯವೇದವು J.V. (BSI)
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ.
Compare
Explore ಲೂಕ 10:19
2
ಲೂಕ 10:41-42
ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.
Explore ಲೂಕ 10:41-42
3
ಲೂಕ 10:27
ಅದಕ್ಕೆ ಅವನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ ಅಂದನು.
Explore ಲೂಕ 10:27
4
ಲೂಕ 10:2
ತಾನು ಹೋಗಬೇಕೆಂದಿದ್ದ ಪ್ರತಿಯೊಂದೂರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ.
Explore ಲೂಕ 10:2
5
ಲೂಕ 10:36-37
ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು ಎಂದು ಕೇಳಿದ್ದಕ್ಕೆ ಆ ಧರ್ಮೋಪದೇಶಕನು - ಅವನಿಗೆ ದಯತೋರಿಸಿದವನೇ ಅಂದನು. ಆಗ ಯೇಸು ಅವನಿಗೆ - ಹೋಗು, ನೀನೂ ಅದರಂತೆ ಮಾಡು ಎಂದು ಹೇಳಿದನು.
Explore ಲೂಕ 10:36-37
6
ಲೂಕ 10:3
ಹೋಗಿರಿ; ತೋಳಗಳ ನಡುವೆ ಕುರಿಮರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ ನೋಡಿರಿ.
Explore ಲೂಕ 10:3
Home
Bible
Plans
Videos