1
ಯೊವಾನ್ನ 17:17
ಕನ್ನಡ ಸತ್ಯವೇದವು C.L. Bible (BSI)
ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.
مقایسه
ಯೊವಾನ್ನ 17:17 را جستجو کنید
2
ಯೊವಾನ್ನ 17:3
ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.
ಯೊವಾನ್ನ 17:3 را جستجو کنید
3
ಯೊವಾನ್ನ 17:20-21
“ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ. ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.
ಯೊವಾನ್ನ 17:20-21 را جستجو کنید
4
ಯೊವಾನ್ನ 17:15
ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.
ಯೊವಾನ್ನ 17:15 را جستجو کنید
5
ಯೊವಾನ್ನ 17:22-23
ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.
ಯೊವಾನ್ನ 17:22-23 را جستجو کنید
خانه
كتابمقدس
برنامههای مطالعه
ویدیوها