1
ಯೊವಾನ್ನ 13:34-35
ಕನ್ನಡ ಸತ್ಯವೇದವು C.L. Bible (BSI)
ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ. ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.
Compare
Explore ಯೊವಾನ್ನ 13:34-35
2
ಯೊವಾನ್ನ 13:14-15
ನಿಮಗೆ ಪ್ರಭೂವೂ ಬೋಧಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ. ನಾನು ನಿಮಗೆ ಒಂದು ಆದರ್ಶವನ್ನು ಕೊಟ್ಟಿದ್ದೇನೆ. ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ.
Explore ಯೊವಾನ್ನ 13:14-15
3
ಯೊವಾನ್ನ 13:7
ಯೇಸು, “ನಾನು ಮಾಡುತ್ತಿರುವುದು ನಿನಗೆ ಈಗ ಅರ್ಥವಾಗದು, ಮುಂದೆ ಅರ್ಥವಾಗುತ್ತದೆ,” ಎಂದು ಉತ್ತರಿಸಿದರು.
Explore ಯೊವಾನ್ನ 13:7
4
ಯೊವಾನ್ನ 13:16
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.
Explore ಯೊವಾನ್ನ 13:16
5
ಯೊವಾನ್ನ 13:17
ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !
Explore ಯೊವಾನ್ನ 13:17
6
ಯೊವಾನ್ನ 13:4-5
ಅವರು ಊಟದಿಂದ ಎದ್ದು, ತಮ್ಮ ಮೇಲುಹೊದಿಕೆಯನ್ನು ತೆಗೆದಿಟ್ಟರು. ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡರು. ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು.
Explore ಯೊವಾನ್ನ 13:4-5
હોમ
બાઇબલ
યોજનાઓ
વિડિઓઝ