1
ಆದಿ 4:7
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
השווה
חקרו ಆದಿ 4:7
2
ಆದಿ 4:26
ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
חקרו ಆದಿ 4:26
3
ಆದಿ 4:9
ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
חקרו ಆದಿ 4:9
4
ಆದಿ 4:10
ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
חקרו ಆದಿ 4:10
5
ಆದಿ 4:15
ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
חקרו ಆದಿ 4:15
בית
כתבי הקודש
תכניות
קטעי וידאו