1
ಆದಿಕಾಂಡ 1:26-27
ಕನ್ನಡ ಸತ್ಯವೇದವು J.V. (BSI)
ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.
Összehasonlít
Fedezd fel: ಆದಿಕಾಂಡ 1:26-27
2
ಆದಿಕಾಂಡ 1:28
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.
Fedezd fel: ಆದಿಕಾಂಡ 1:28
3
ಆದಿಕಾಂಡ 1:1
ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.
Fedezd fel: ಆದಿಕಾಂಡ 1:1
4
ಆದಿಕಾಂಡ 1:2
ಭೂವಿುಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು; ಆದಿಸಾಗರದ ಮೇಲೆ ಕತ್ತಲಿತ್ತು; ದೇವರಾತ್ಮವು ಜಲಸಮೂಹಗಳ ಮೇಲೆ ಚಲಿಸುತ್ತಿತ್ತು.
Fedezd fel: ಆದಿಕಾಂಡ 1:2
5
ಆದಿಕಾಂಡ 1:3
ಆಗ ದೇವರು - ಬೆಳಕಾಗಲಿ ಅನ್ನಲು ಬೆಳಕಾಯಿತು.
Fedezd fel: ಆದಿಕಾಂಡ 1:3
6
ಆದಿಕಾಂಡ 1:31
ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅದು ಬಹು ಒಳ್ಳೇದಾಗಿತ್ತು. ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
Fedezd fel: ಆದಿಕಾಂಡ 1:31
7
ಆದಿಕಾಂಡ 1:4
ದೇವರು ಆ ಬೆಳಕನ್ನು ಒಳ್ಳೇದೆಂದು ನೋಡಿದನು. ದೇವರು ಬೆಳಕನ್ನೂ ಕತ್ತಲೆಯನ್ನೂ ಬೇರೆ ಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟನು.
Fedezd fel: ಆದಿಕಾಂಡ 1:4
8
ಆದಿಕಾಂಡ 1:29
ಮತ್ತು ದೇವರು - ಇಗೋ, ಸಮಸ್ತಭೂವಿುಯ ಮೇಲೆ ಬೀಜವುಳ್ಳ ಎಲ್ಲಾ ಪೈರುಗಳನ್ನೂ ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ.
Fedezd fel: ಆದಿಕಾಂಡ 1:29
9
ಆದಿಕಾಂಡ 1:5
ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
Fedezd fel: ಆದಿಕಾಂಡ 1:5
10
ಆದಿಕಾಂಡ 1:6
ಬಳಿಕ ದೇವರು - ಜಲಸಮೂಹಗಳ ನಡುವೆ ವಿಸ್ತಾರವಾದ ಗುಮಟವು ಉಂಟಾಗಲಿ; ಅದು ಕೆಳಗಣ ನೀರುಗಳನ್ನೂ ಮೇಲಣ ನೀರುಗಳನ್ನೂ ಬೇರೆ ಬೇರೆ ಮಾಡಲಿ ಅಂದನು.
Fedezd fel: ಆದಿಕಾಂಡ 1:6
11
ಆದಿಕಾಂಡ 1:30
ಇದಲ್ಲದೆ ಭೂವಿುಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಎಂಬ ಜೀವಿಗಳಿಗೆ ಎಲ್ಲಾ ಹುಲ್ಲುಸೊಪ್ಪುಗಳನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಎಂದು ಹೇಳಿದನು; ಅದು ಹಾಗೆಯೇ ಆಯಿತು.
Fedezd fel: ಆದಿಕಾಂಡ 1:30
12
ಆದಿಕಾಂಡ 1:14
ಬಳಿಕ ದೇವರು - ಆಕಾಶಮಂಡಲದಲ್ಲಿ ಬೆಳಕುಗಳು ಉಂಟಾಗಲಿ; ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ; ಇದಲ್ಲದೆ ಅವು ಗುರುತುಗಳಾಗಿದ್ದು ಸಮಯಗಳನ್ನೂ ದಿನಸಂವತ್ಸರಗಳನ್ನೂ ತೋರಿಸಲಿ
Fedezd fel: ಆದಿಕಾಂಡ 1:14
13
ಆದಿಕಾಂಡ 1:11
ತರುವಾಯ ದೇವರು - ಭೂವಿುಯು ಹುಲ್ಲನ್ನೂ ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಸಲಿ; ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನೂ ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ ಎಂದು ಹೇಳಿದನು; ಹಾಗೆಯೇ ಆಯಿತು.
Fedezd fel: ಆದಿಕಾಂಡ 1:11
14
ಆದಿಕಾಂಡ 1:7
ದೇವರು ವಿಸ್ತಾರವಾದ ಗುಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು; ಹಾಗೆಯೇ ಆಯಿತು.
Fedezd fel: ಆದಿಕಾಂಡ 1:7
15
ಆದಿಕಾಂಡ 1:12
ಭೂವಿುಯಲ್ಲಿ ಹುಲ್ಲು ಬೆಳೆಯಿತು; ತಮ್ಮತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು; ತಮ್ಮತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಕಾಣಿಸಿದವು. ದೇವರು ಅದನ್ನು ಒಳ್ಳೇದೆಂದು ನೋಡಿದನು.
Fedezd fel: ಆದಿಕಾಂಡ 1:12
16
ಆದಿಕಾಂಡ 1:16
ದೇವರು ಹಗಲನ್ನಾಳುವದಕ್ಕೆ ದೊಡ್ಡ ಬೆಳಕನ್ನೂ ಇರುಳನ್ನಾಳುವದಕ್ಕೆ ಚಿಕ್ಕ ಬೆಳಕನ್ನೂ, ಈ ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟುಮಾಡಿದನು.
Fedezd fel: ಆದಿಕಾಂಡ 1:16
17
ಆದಿಕಾಂಡ 1:9-10
ಅನಂತರ ದೇವರು - ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣನೆಲವು ಕಾಣಿಸಲಿ ಅಂದನು; ಹಾಗೆಯೇ ಆಯಿತು. ದೇವರು ಒಣನೆಲಕ್ಕೆ ಭೂವಿುಯೆಂದೂ ಜಲಸಮೂಹಕ್ಕೆ ಸಮುದ್ರವೆಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೇದೆಂದು ನೋಡಿದನು.
Fedezd fel: ಆದಿಕಾಂಡ 1:9-10
18
ಆದಿಕಾಂಡ 1:22
ಇದಲ್ಲದೆ ದೇವರು ಅವುಗಳಿಗೆ - ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಹೆಚ್ಚಲಿ ಎಂದು ಹೇಳಿ ಆಶೀರ್ವದಿಸಿದನು.
Fedezd fel: ಆದಿಕಾಂಡ 1:22
19
ಆದಿಕಾಂಡ 1:24
ಮತ್ತು ದೇವರು - ಭೂವಿುಯಿಂದ ಜೀವಜಂತುಗಳು ಉಂಟಾಗಲಿ; ಪಶುಕ್ರಿವಿುಗಳೂ ಕಾಡುಮೃಗಗಳೂ ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ ಅಂದನು; ಹಾಗೆಯೇ ಆಯಿತು.
Fedezd fel: ಆದಿಕಾಂಡ 1:24
20
ಆದಿಕಾಂಡ 1:20
ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು.
Fedezd fel: ಆದಿಕಾಂಡ 1:20
21
ಆದಿಕಾಂಡ 1:25
ದೇವರು ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳನ್ನೂ ಅವುಗಳ ಜಾತಿಗನುಸಾರ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.
Fedezd fel: ಆದಿಕಾಂಡ 1:25
Kezdőoldal
Biblia
Olvasótervek
Videók