1
ವಿಮೋಚನಕಾಂಡ 2:24-25
ಪರಿಶುದ್ದ ಬೈಬಲ್
ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು. ದೇವರು ಇಸ್ರೇಲರ ಸಂಕಟಗಳನ್ನು ನೋಡಿ ಅವರಿಗೆ ಸಹಾಯಮಾಡಲು ನಿಶ್ಚಯಿಸಿಕೊಂಡನು.
Bera saman
Njòttu ವಿಮೋಚನಕಾಂಡ 2:24-25
2
ವಿಮೋಚನಕಾಂಡ 2:23
ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.
Njòttu ವಿಮೋಚನಕಾಂಡ 2:23
3
ವಿಮೋಚನಕಾಂಡ 2:10
ಮಗುವು ಬೆಳೆಯಿತು. ಸ್ವಲ್ಪಕಾಲದ ನಂತರ ಆ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಆ ಬಾಲಕನನ್ನು ತನ್ನ ಸ್ವಂತ ಮಗನೆಂದು ಸ್ವೀಕರಿಸಿದಳು. ಆ ಬಾಲಕನನ್ನು ನೀರಿನೊಳಗಿಂದ ಎಳೆದೆನೆಂದು ಆ ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು.
Njòttu ವಿಮೋಚನಕಾಂಡ 2:10
4
ವಿಮೋಚನಕಾಂಡ 2:9
ರಾಜನ ಮಗಳು ತಾಯಿಗೆ, “ಈ ಮಗುವಿಗೆ ಹಾಲು ಕುಡಿಸಿ ನೋಡಿಕೊ, ನಾನು ನಿನಗೆ ಸಂಬಳ ಕೊಡುವೆನು” ಎಂದು ಹೇಳಿದಳು. ಆದ್ದರಿಂದ ಆ ಸ್ತ್ರೀ ತನ್ನ ಮಗುವನ್ನು ತೆಗೆದುಕೊಂಡು ಸಾಕಿದಳು.
Njòttu ವಿಮೋಚನಕಾಂಡ 2:9
5
ವಿಮೋಚನಕಾಂಡ 2:5
ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
Njòttu ವಿಮೋಚನಕಾಂಡ 2:5
6
ವಿಮೋಚನಕಾಂಡ 2:11-12
ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ ಮೋಶೆಯು ಸುತ್ತಲೂ ನೋಡಿ ಯಾರೂ ಗಮನಿಸುತ್ತಿಲ್ಲವೆಂದು ತಿಳಿದುಕೊಂಡು ಈಜಿಪ್ಟಿನವನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
Njòttu ವಿಮೋಚನಕಾಂಡ 2:11-12
Heim
Biblía
Áætlanir
Myndbönd