ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ. ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.