ಅಬ್ರಹಾಮನು ಯೆಹೋವನ ಸಮೀಪಕ್ಕೆ ಬಂದು, “ಯೆಹೋವನೇ, ನೀನು ಕೆಟ್ಟವರನ್ನು ನಾಶಮಾಡುವಾಗ ನೀತಿವಂತರನ್ನು ಸಹ ನಾಶಮಾಡಬೇಕೆಂದಿರುವೆಯೋ? ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ.