ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತುಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು.
ಆದರೆ ಯಾಕೋಬನು, “ನೀನು ಅದನ್ನು ಕೊಡುವುದಾಗಿ ಪ್ರಮಾಣಮಾಡು” ಅಂದನು. ಆದ್ದರಿಂದ ಏಸಾವನು ಯಾಕೋಬನಿಗೆ ಪ್ರಮಾಣ ಮಾಡಿದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಯಾಕೋಬನಿಗೆ ಮಾರಿಕೊಂಡನು.