ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು:
“ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು.
ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು.
ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು.
ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು.
ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು.
ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ
ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”