1
ಯೋಹಾನನ ಸುವಾರ್ತೆ 14:27
ಪರಿಶುದ್ದ ಬೈಬಲ್
“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.
Bera saman
Explore ಯೋಹಾನನ ಸುವಾರ್ತೆ 14:27
2
ಯೋಹಾನನ ಸುವಾರ್ತೆ 14:6
ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.
Explore ಯೋಹಾನನ ಸುವಾರ್ತೆ 14:6
3
ಯೋಹಾನನ ಸುವಾರ್ತೆ 14:1
ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ.
Explore ಯೋಹಾನನ ಸುವಾರ್ತೆ 14:1
4
ಯೋಹಾನನ ಸುವಾರ್ತೆ 14:26
ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.
Explore ಯೋಹಾನನ ಸುವಾರ್ತೆ 14:26
5
ಯೋಹಾನನ ಸುವಾರ್ತೆ 14:21
ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.
Explore ಯೋಹಾನನ ಸುವಾರ್ತೆ 14:21
6
ಯೋಹಾನನ ಸುವಾರ್ತೆ 14:16-17
ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ಆತನು ಬೇರೊಬ್ಬ ಸಹಾಯಕನನ್ನು ನಿಮಗೆ ಕೊಡುವನು. ಆ ಸಹಾಯಕನು ಸದಾಕಾಲ ನಿಮ್ಮೊಂದಿಗಿರುವನು. ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.
Explore ಯೋಹಾನನ ಸುವಾರ್ತೆ 14:16-17
7
ಯೋಹಾನನ ಸುವಾರ್ತೆ 14:13-14
ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು. ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ಅದನ್ನು ನೆರವೇರಿಸುವೆನು.
Explore ಯೋಹಾನನ ಸುವಾರ್ತೆ 14:13-14
8
ಯೋಹಾನನ ಸುವಾರ್ತೆ 14:15
“ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ಆಜ್ಞಾಪಿಸುವವುಗಳನ್ನು ಮಾಡುವಿರಿ.
Explore ಯೋಹಾನನ ಸುವಾರ್ತೆ 14:15
9
ಯೋಹಾನನ ಸುವಾರ್ತೆ 14:2
ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ.
Explore ಯೋಹಾನನ ಸುವಾರ್ತೆ 14:2
10
ಯೋಹಾನನ ಸುವಾರ್ತೆ 14:3
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.
Explore ಯೋಹಾನನ ಸುವಾರ್ತೆ 14:3
11
ಯೋಹಾನನ ಸುವಾರ್ತೆ 14:5
ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.
Explore ಯೋಹಾನನ ಸುವಾರ್ತೆ 14:5
Heim
Biblía
Áætlanir
Myndbönd