1
ಯೋಹಾನನ ಸುವಾರ್ತೆ 15:5
ಪರಿಶುದ್ದ ಬೈಬಲ್
“ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.
Bera saman
Explore ಯೋಹಾನನ ಸುವಾರ್ತೆ 15:5
2
ಯೋಹಾನನ ಸುವಾರ್ತೆ 15:4
ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.
Explore ಯೋಹಾನನ ಸುವಾರ್ತೆ 15:4
3
ಯೋಹಾನನ ಸುವಾರ್ತೆ 15:7
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಕೇಳಿಕೊಳ್ಳಿರಿ, ಅದು ನಿಮಗೆ ದೊರೆಯುವುದು.
Explore ಯೋಹಾನನ ಸುವಾರ್ತೆ 15:7
4
ಯೋಹಾನನ ಸುವಾರ್ತೆ 15:16
“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.
Explore ಯೋಹಾನನ ಸುವಾರ್ತೆ 15:16
5
ಯೋಹಾನನ ಸುವಾರ್ತೆ 15:13
ಗೆಳೆಯರಿಗಾಗಿ ಸ್ವಂತ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.
Explore ಯೋಹಾನನ ಸುವಾರ್ತೆ 15:13
6
ಯೋಹಾನನ ಸುವಾರ್ತೆ 15:2
ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.
Explore ಯೋಹಾನನ ಸುವಾರ್ತೆ 15:2
7
ಯೋಹಾನನ ಸುವಾರ್ತೆ 15:12
ನಾನು ನಿಮ್ಮನ್ನು ಪ್ರೀತಿಸಿದಂತೆ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ.
Explore ಯೋಹಾನನ ಸುವಾರ್ತೆ 15:12
8
ಯೋಹಾನನ ಸುವಾರ್ತೆ 15:8
ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.
Explore ಯೋಹಾನನ ಸುವಾರ್ತೆ 15:8
9
ಯೋಹಾನನ ಸುವಾರ್ತೆ 15:1
“ನಾನು ನಿಜವಾದ ದ್ರಾಕ್ಷಿಬಳ್ಳಿ. ನನ್ನ ತಂದೆ ತೋಟಗಾರನು.
Explore ಯೋಹಾನನ ಸುವಾರ್ತೆ 15:1
10
ಯೋಹಾನನ ಸುವಾರ್ತೆ 15:6
ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.
Explore ಯೋಹಾನನ ಸುವಾರ್ತೆ 15:6
11
ಯೋಹಾನನ ಸುವಾರ್ತೆ 15:11
ನನಗಿರುವ ಆನಂದವನ್ನು ನೀವೂ ಹೊಂದಿಕೊಳ್ಳಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನು ಹೇಳಿದ್ದೇನೆ. ನಿಮ್ಮ ಆನಂದವು ಪರಿಪೂರ್ಣವಾದ ಆನಂದವಾಗಿರಬೇಕೆಂದು ನಾನು ಬಯಸುತ್ತೇನೆ.
Explore ಯೋಹಾನನ ಸುವಾರ್ತೆ 15:11
12
ಯೋಹಾನನ ಸುವಾರ್ತೆ 15:10
ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
Explore ಯೋಹಾನನ ಸುವಾರ್ತೆ 15:10
13
ಯೋಹಾನನ ಸುವಾರ್ತೆ 15:17
ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆ.
Explore ಯೋಹಾನನ ಸುವಾರ್ತೆ 15:17
14
ಯೋಹಾನನ ಸುವಾರ್ತೆ 15:19
ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.
Explore ಯೋಹಾನನ ಸುವಾರ್ತೆ 15:19
Heim
Biblía
Áætlanir
Myndbönd