1
ಯೋಹಾನನ ಸುವಾರ್ತೆ 5:24
ಪರಿಶುದ್ದ ಬೈಬಲ್
“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.
Bera saman
Explore ಯೋಹಾನನ ಸುವಾರ್ತೆ 5:24
2
ಯೋಹಾನನ ಸುವಾರ್ತೆ 5:6
ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.
Explore ಯೋಹಾನನ ಸುವಾರ್ತೆ 5:6
3
ಯೋಹಾನನ ಸುವಾರ್ತೆ 5:39-40
ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ! ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ.
Explore ಯೋಹಾನನ ಸುವಾರ್ತೆ 5:39-40
4
ಯೋಹಾನನ ಸುವಾರ್ತೆ 5:8-9
ಆಗ ಯೇಸು, “ಎದ್ದುನಿಲ್ಲು! ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ” ಎಂದು ಹೇಳಿದನು. ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು. ಇದೆಲ್ಲಾ ನಡೆದದ್ದು ಸಬ್ಬತ್ದಿನದಲ್ಲಿ.
Explore ಯೋಹಾನನ ಸುವಾರ್ತೆ 5:8-9
5
ಯೋಹಾನನ ಸುವಾರ್ತೆ 5:19
ಅದಕ್ಕೆ ಉತ್ತರವಾಗಿ ಆತನು ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ.
Explore ಯೋಹಾನನ ಸುವಾರ್ತೆ 5:19
Heim
Biblía
Áætlanir
Myndbönd