1
ಲೂಕನ ಸುವಾರ್ತೆ 13:24
ಪರಿಶುದ್ದ ಬೈಬಲ್
“ಸ್ವರ್ಗಕ್ಕೆ ನಡೆಸುವ ಕಿರಿದಾದ ಬಾಗಿಲಿನ ಮೂಲಕ ಹೋಗಲು ಪ್ರಯಾಸಪಡಿರಿ! ಅನೇಕ ಜನರು ಅದರ ಮೂಲಕ ಹೋಗಲು ಪ್ರಯತ್ನಿಸುತ್ತಾರೆ. ಆದರೆ ಅವರಿಂದ ಆಗುವುದಿಲ್ಲ.
Bera saman
Explore ಲೂಕನ ಸುವಾರ್ತೆ 13:24
2
ಲೂಕನ ಸುವಾರ್ತೆ 13:11-12
ದೆವ್ವದಿಂದ ಪೀಡಿತಳಾಗಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆ ದೆವ್ವದಿಂದಾಗಿ ಆಕೆಗೆ ಹದಿನೆಂಟು ವರ್ಷಗಳಿಂದ ನಡು ಬಗ್ಗಿಕೊಂಡಿತ್ತು. ನೆಟ್ಟಗೆ ನಿಂತುಕೊಳ್ಳಲು ಆಕೆಗೆ ಸಾಧ್ಯವಿರಲಿಲ್ಲ. ಯೇಸು ಆಕೆಯನ್ನು ಕಂಡು, ತನ್ನ ಬಳಿಗೆ ಕರೆದು, “ಅಮ್ಮಾ, ನಿನ್ನ ಕಾಯಿಲೆ ನಿನ್ನನ್ನು ಬಿಟ್ಟುಹೋಗಿದೆ!” ಎಂದು ಹೇಳಿದನು.
Explore ಲೂಕನ ಸುವಾರ್ತೆ 13:11-12
3
ಲೂಕನ ಸುವಾರ್ತೆ 13:13
ಯೇಸು ಆಕೆಯ ಮೇಲೆ ತನ್ನ ಕೈಗಳನ್ನಿಟ್ಟಾಗ ಆಕೆ ನೆಟ್ಟಗೆ ನಿಲ್ಲಲು ಶಕ್ತಳಾದಳು. ಆಕೆ ದೇವರನ್ನು ಕೊಂಡಾಡಿದಳು.
Explore ಲೂಕನ ಸುವಾರ್ತೆ 13:13
4
ಲೂಕನ ಸುವಾರ್ತೆ 13:30
ಇಗೋ, ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು, ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು.”
Explore ಲೂಕನ ಸುವಾರ್ತೆ 13:30
5
ಲೂಕನ ಸುವಾರ್ತೆ 13:25
ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.
Explore ಲೂಕನ ಸುವಾರ್ತೆ 13:25
6
ಲೂಕನ ಸುವಾರ್ತೆ 13:5
ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.
Explore ಲೂಕನ ಸುವಾರ್ತೆ 13:5
7
ಲೂಕನ ಸುವಾರ್ತೆ 13:27
ಆಗ ಅವನು ನಿಮಗೆ, ‘ನೀವು ಯಾರೋ ನನಗೆ ಗೊತ್ತಿಲ್ಲ! ನೀವು ಎಲ್ಲಿಯವರು? ಇಲ್ಲಿಂದ ಹೊರಟುಹೋಗಿ! ನೀವೆಲ್ಲರೂ ಪಾಪಕೃತ್ಯಗಳನ್ನು ಮಾಡುವ ಜನರು!’ ಎಂದು ನಿಮಗೆ ಹೇಳುವನು.
Explore ಲೂಕನ ಸುವಾರ್ತೆ 13:27
8
ಲೂಕನ ಸುವಾರ್ತೆ 13:18-19
ಬಳಿಕ ಯೇಸು, “ದೇವರ ರಾಜ್ಯ ಯಾವುದಕ್ಕೆ ಹೋಲಿಕೆಯಾಗಿದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ? ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.
Explore ಲೂಕನ ಸುವಾರ್ತೆ 13:18-19
Heim
Biblía
Áætlanir
Myndbönd