ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ. ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”