ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ. ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.