ವಿಮೋಚನಕಾಂಡ 5:8-9

ವಿಮೋಚನಕಾಂಡ 5:8-9 KERV

ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ. ಈ ಜನರಿಗೆ ಇನ್ನೂ ಕಷ್ಟಕರವಾದ ಕೆಲಸವನ್ನು ಕೊಡಿರಿ. ಅವರು ಕಾರ್ಯಮಗ್ನರಾಗಿರುವಂತೆ ನೋಡಿಕೊಳ್ಳಿರಿ. ಆಗ ಅವರಿಗೆ ಮೋಶೆಯ ಸುಳ್ಳುಗಳನ್ನು ಕೇಳುವುದಕ್ಕೆ ಸಮಯವಿರುವುದಿಲ್ಲ” ಎಂದು ಹೇಳಿದನು.