ಆದಿಕಾಂಡ 17:11-14

ಆದಿಕಾಂಡ 17:11-14 KERV

ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು. ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.