ಆದಿಕಾಂಡ 39:20-21
ಆದಿಕಾಂಡ 39:20-21 KERV
ರಾಜನ ವೈರಿಗಳನ್ನು ಹಾಕುವ ಒಂದು ಸೆರೆಮನೆಯಿತ್ತು. ಆದ್ದರಿಂದ ಪೋಟೀಫರನು ಯೋಸೇಫನನ್ನು ಆ ಸೆರೆಮನೆಗೆ ಹಾಕಿಸಿದನು. ಅಂದಿನಿಂದ ಯೋಸೇಫನು ಅಲ್ಲಿದ್ದನು. ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸತೊಡಗಿದನು.