1
ಯೊವಾನ್ನ 15:5
ಕನ್ನಡ ಸತ್ಯವೇದವು C.L. Bible (BSI)
“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.
比較
ಯೊವಾನ್ನ 15:5で検索
2
ಯೊವಾನ್ನ 15:4
ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.
ಯೊವಾನ್ನ 15:4で検索
3
ಯೊವಾನ್ನ 15:7
“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.
ಯೊವಾನ್ನ 15:7で検索
4
ಯೊವಾನ್ನ 15:16
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.
ಯೊವಾನ್ನ 15:16で検索
5
ಯೊವಾನ್ನ 15:13
ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.
ಯೊವಾನ್ನ 15:13で検索
6
ಯೊವಾನ್ನ 15:2
ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.
ಯೊವಾನ್ನ 15:2で検索
7
ಯೊವಾನ್ನ 15:12
ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.
ಯೊವಾನ್ನ 15:12で検索
8
ಯೊವಾನ್ನ 15:8
ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.
ಯೊವಾನ್ನ 15:8で検索
9
ಯೊವಾನ್ನ 15:1
“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ.
ಯೊವಾನ್ನ 15:1で検索
10
ಯೊವಾನ್ನ 15:6
ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.
ಯೊವಾನ್ನ 15:6で検索
11
ಯೊವಾನ್ನ 15:11
“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.
ಯೊವಾನ್ನ 15:11で検索
12
ಯೊವಾನ್ನ 15:10
ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
ಯೊವಾನ್ನ 15:10で検索
13
ಯೊವಾನ್ನ 15:17
ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.
ಯೊವಾನ್ನ 15:17で検索
14
ಯೊವಾನ್ನ 15:19
ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.
ಯೊವಾನ್ನ 15:19で検索
ホーム
聖書
読書プラン
ビデオ