1
ಯೋಹಾನ 14:27
ಕನ್ನಡ ಸತ್ಯವೇದವು J.V. (BSI)
ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ತಾಳೆಮಾಡಿ
ಯೋಹಾನ 14:27 ಅನ್ವೇಷಿಸಿ
2
ಯೋಹಾನ 14:6
ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಯೋಹಾನ 14:6 ಅನ್ವೇಷಿಸಿ
3
ಯೋಹಾನ 14:1
ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ಯೋಹಾನ 14:1 ಅನ್ವೇಷಿಸಿ
4
ಯೋಹಾನ 14:26
ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ಯೋಹಾನ 14:26 ಅನ್ವೇಷಿಸಿ
5
ಯೋಹಾನ 14:21
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.
ಯೋಹಾನ 14:21 ಅನ್ವೇಷಿಸಿ
6
ಯೋಹಾನ 14:16-17
ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು; ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
ಯೋಹಾನ 14:16-17 ಅನ್ವೇಷಿಸಿ
7
ಯೋಹಾನ 14:13-14
ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ಅದನ್ನು ನೆರವೇರಿಸುವೆನು.
ಯೋಹಾನ 14:13-14 ಅನ್ವೇಷಿಸಿ
8
ಯೋಹಾನ 14:15
ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
ಯೋಹಾನ 14:15 ಅನ್ವೇಷಿಸಿ
9
ಯೋಹಾನ 14:2
ನನ್ನ ತಂದೆಯ ಮನೆಯಲ್ಲಿ ಬಹಳ ಬಿಡಾರಗಳು ಅವೆ; ಇಲ್ಲದಿದ್ದರೆ ನಿಮಗೆ ಹೇಳುತ್ತಿದ್ದೆನು; ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗುತ್ತೇನಲ್ಲಾ.
ಯೋಹಾನ 14:2 ಅನ್ವೇಷಿಸಿ
10
ಯೋಹಾನ 14:3
ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.
ಯೋಹಾನ 14:3 ಅನ್ವೇಷಿಸಿ
11
ಯೋಹಾನ 14:5
ತೋಮನು ಆತನನ್ನು - ಸ್ವಾಮೀ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ಮಾರ್ಗವು ಹೇಗೆ ತಿಳಿದೀತು ಎಂದು ಕೇಳಲು
ಯೋಹಾನ 14:5 ಅನ್ವೇಷಿಸಿ
ಮುಖಪುಟ
ಬೈಬಲ್
ಯೋಜನೆಗಳು
ವೀಡಿಯೊಗಳು