1
ಯೋಹಾನ 4:24
ಕನ್ನಡ ಸತ್ಯವೇದವು J.V. (BSI)
ದೇವರು ಆತ್ಮಸ್ವರೂಪನು; ಆತನನ್ನು ಆರಾಧಿಸುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ಆರಾಧಿಸಬೇಕು ಅಂದನು.
Compare
Explore ಯೋಹಾನ 4:24
2
ಯೋಹಾನ 4:23
ಅದಿರಲಿ; ಸತ್ಯಭಾವದಿಂದ ದೇವಾರಾಧನೆ ಮಾಡುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ತಂದೆಯನ್ನು ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ; ತಂದೆಯು ತನ್ನನ್ನು ಆರಾಧಿಸುವವರು ಇಂಥವರೇ ಆಗಿರಬೇಕೆಂದು ಅಪೇಕ್ಷಿಸುತ್ತಾನಲ್ಲವೇ.
Explore ಯೋಹಾನ 4:23
3
ಯೋಹಾನ 4:14
ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.
Explore ಯೋಹಾನ 4:14
4
ಯೋಹಾನ 4:10
ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.
Explore ಯೋಹಾನ 4:10
5
ಯೋಹಾನ 4:34
ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.
Explore ಯೋಹಾನ 4:34
6
ಯೋಹಾನ 4:11
ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
Explore ಯೋಹಾನ 4:11
7
ಯೋಹಾನ 4:25-26
ಆ ಹೆಂಗಸು ಆತನಿಗೆ - ಮೆಸ್ಸೀಯನು ಅಂದರೆ ಕ್ರಿಸ್ತನು ಬರುತ್ತಾನೆಂದು ಬಲ್ಲೆನು; ಆತನು ಬಂದ ಮೇಲೆ ನಮಗೆ ಎಲ್ಲಾ ತಿಳಿಸುವನು ಎಂದು ಹೇಳಲು ಯೇಸು ಆಕೆಗೆ - ನಿನ್ನ ಸಂಗಡ ಮಾತಾಡುತ್ತಿರುವ ನಾನೇ ಆ ಮೆಸ್ಸೀಯನು ಎಂದು ಹೇಳಿದನು.
Explore ಯೋಹಾನ 4:25-26
8
ಯೋಹಾನ 4:29
ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು
Explore ಯೋಹಾನ 4:29
ಮುಖಪುಟ
ಬೈಬಲ್
ಯೋಜನೆಗಳು
ವೀಡಿಯೊಗಳು