ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ. ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.