ಯೆಜೆಕಿಯೇಲನು 1:4-9
ಯೆಜೆಕಿಯೇಲನು 1:4-9 KANCLBSI
ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು. ಅದರ ಮಧ್ಯೆದಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು. ಅವುಗಳ ರೂಪ ಮನುಷ್ಯರೂಪದಂತಿತ್ತು. ಒಂದೊಂದಕ್ಕೆ ನಾಲ್ಕು ಮುಖಗಳು, ನಾಲ್ಕು ರೆಕ್ಕೆಗಳು ಇದ್ದವು. ಇವುಗಳ ಕಾಲು ನೆಟ್ಟಗಿದ್ದವು; ಪಾದಗಳು ಕರುವಿನ ಗೊರಸಿನಂತೆ ಇದ್ದವು; ಬೆಳಗಿದ ಕಂಚಿನಂತೆ ಮಿನುಮಿನುಗುತ್ತಿದ್ದವು. ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳಿದ್ದವು. ಆ ನಾಲ್ಕು ಜೀವಿಗಳ ಮುಖಗಳೂ ರೆಕ್ಕೆಗಳೂ ಹೇಗಿದ್ದವೆಂದರೆ - ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಹಿಂತಿರುಗಿ ನೋಡದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು.