ಯೆರೆಮೀಯ 47

47
ಫಿಲಿಷ್ಟಿಯವನ್ನು ಕುರಿತ ವಾಣಿ
1ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ:
2“ಸರ್ವೇಶ್ವರನ ವಾರ್ತೆ ಇದು:
ಇಗೋ, ಬಡಗಲಿಂದ ಪ್ರವಾಹ ಹೊರಡುವುದು
ತುಂಬಿತುಳುಕುವ ತೊರೆಯಾಗಿ ಬರುವುದು.
ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು.
ನಗರವನ್ನು, ಅದರ ನಿವಾಸಿಗಳನ್ನು.
ಆಗ ನಾಡಿನವರೆಲ್ಲರೂ ಮೊರೆಯಿಡುವರು
ದೇಶದವರೆಲ್ಲರು ಗೋಳಾಡುವರು.
3ಯುದ್ಧ ಕುದುರೆಗಳೋಟದ ಶಬ್ದಕ್ಕೂ
ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ
ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು.
ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.
4ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು
ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು.
ಸರ್ವೇಶ್ವರನೆ ನಾಶಮಾಡುವನು
ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.
5ಗಾಜಾ ಊರು ತಲೆಬೋಳಿಸಿಕೊಂಡಿದೆ
ಅಷ್ಕೆಲೋನ್ ಊರು ನಿಶ್ಶಬ್ದವಾಗಿದೆ.
ಅನಕಿಮ್ ಬೈಲುನಾಡಿನ ಅವಶೇಷವೇ,
ಎಂದಿನವರೆಗೆ ನಿನ್ನನ್ನೇ ಕತ್ತರಿಸಿಕೊಳ್ಳುತ್ತಿರುವೆ !
6ಎಲೈ, ಸರ್ವೇಶ್ವರನ ಖಡ್ಗವೇ,
ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದಿರುವೆ?
ಓರೆಯಲ್ಲಿ ಅವಿತುಕೊಂಡರು,
ಶಾಂತಿಗೊಳ್ಳು, ಸುಮ್ಮನಿರು.
7ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ?
ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ?
ಅಷ್ಕೆಲೋನಿನ ಹಾಗು ಕರಾವಳಿಯವರೆಗೆ
ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?”

ಪ್ರಸ್ತುತ ಆಯ್ಕೆ ಮಾಡಲಾಗಿದೆ:

ಯೆರೆಮೀಯ 47: KANCLBSI

Highlight

ಶೇರ್

ಕಾಪಿ

None

Want to have your highlights saved across all your devices? Sign up or sign in