1
ಆದಿಕಾಂಡ 3:6
ಪರಿಶುದ್ದ ಬೈಬಲ್
ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.
Salīdzināt
Izpēti ಆದಿಕಾಂಡ 3:6
2
ಆದಿಕಾಂಡ 3:1
ದೇವರಾದ ಯೆಹೋವನು ಸೃಷ್ಟಿಸಿದ ಎಲ್ಲ ಭೂಜಂತುಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯನ್ನು ಮೋಸಗೊಳಿಸಲು ಅವಳ ಬಳಿಗೆ ಬಂದು, “ಏನಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.
Izpēti ಆದಿಕಾಂಡ 3:1
3
ಆದಿಕಾಂಡ 3:15
ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.
Izpēti ಆದಿಕಾಂಡ 3:15
4
ಆದಿಕಾಂಡ 3:16
ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.
Izpēti ಆದಿಕಾಂಡ 3:16
5
ಆದಿಕಾಂಡ 3:19
ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.
Izpēti ಆದಿಕಾಂಡ 3:19
6
ಆದಿಕಾಂಡ 3:17
ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.
Izpēti ಆದಿಕಾಂಡ 3:17
7
ಆದಿಕಾಂಡ 3:11
ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.
Izpēti ಆದಿಕಾಂಡ 3:11
8
ಆದಿಕಾಂಡ 3:24
ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.
Izpēti ಆದಿಕಾಂಡ 3:24
9
ಆದಿಕಾಂಡ 3:20
ಆದಾಮನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದಾಮನು ಹವ್ವ ಎಂದು ಹೆಸರಿಡಲು ಕಾರಣವೇನೆಂದರೆ ಈ ಲೋಕದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಆಕೆಯೇ ಮೂಲ ತಾಯಿ.
Izpēti ಆದಿಕಾಂಡ 3:20
Mājas
Bībele
Plāni
Video