1
ಲೂಕ 6:38
ಕನ್ನಡ ಸತ್ಯವೇದವು J.V. (BSI)
ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರಚೆಲ್ಲುವ ಹಾಗೆ ತುಂಬಾ ಅಳತೆಯನ್ನು ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು ಅಂದನು.
താരതമ്യം
ಲೂಕ 6:38 പര്യവേക്ഷണം ചെയ്യുക
2
ಲೂಕ 6:45
ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.
ಲೂಕ 6:45 പര്യവേക്ഷണം ചെയ്യുക
3
ಲೂಕ 6:35
ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
ಲೂಕ 6:35 പര്യവേക്ഷണം ചെയ്യുക
4
ಲೂಕ 6:36
ನಿಮ್ಮ ತಂದೆ ಕರುಣವುಳ್ಳವನಾಗಿರುವ ಪ್ರಕಾರವೇ ನೀವೂ ಕರುಣವುಳ್ಳವರಾಗಿರಿ.
ಲೂಕ 6:36 പര്യവേക്ഷണം ചെയ്യുക
5
ಲೂಕ 6:37
ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು
ಲೂಕ 6:37 പര്യവേക്ഷണം ചെയ്യുക
6
ಲೂಕ 6:27-28
ಕೇಳುವವರಾದ ನಿಮಗೆ ನಾನು ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.
ಲೂಕ 6:27-28 പര്യവേക്ഷണം ചെയ്യുക
7
ಲೂಕ 6:31
ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
ಲೂಕ 6:31 പര്യവേക്ഷണം ചെയ്യുക
8
ಲೂಕ 6:29-30
ನಿನ್ನನ್ನು ಕೆನ್ನೆಯ ಮೇಲೆ ಬಡಿದವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸು; ನಿನ್ನ ಮೇಲಂಗಿಯನ್ನು ಕಸುಕೊಳ್ಳುವವನಿಗೆ ಒಳಂಗಿಯನ್ನೂ ತಡೆಯಬೇಡ. ನಿನ್ನನ್ನು ಬೇಡುವವರೆಲ್ಲರಿಗೆ ಕೊಡು; ನಿನ್ನ ಸೊತ್ತು ಕಸುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
ಲೂಕ 6:29-30 പര്യവേക്ഷണം ചെയ്യുക
9
ಲೂಕ 6:43
ಒಳ್ಳೆಯ ಮರವು ಹುಳುಕು ಫಲವನ್ನು ಕೊಡುವದಿಲ್ಲ; ಹಾಗೆಯೇ ಹುಳುಕು ಮರವು ಒಳ್ಳೆಯ ಫಲವನ್ನು ಕೊಡುವದಿಲ್ಲ.
ಲೂಕ 6:43 പര്യവേക്ഷണം ചെയ്യുക
10
ಲೂಕ 6:44
ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವದಿಲ್ಲ; ಗಜ್ಜುಗದ ಮೆಳೆಯಲ್ಲಿ ದ್ರಾಕ್ಷೇಹಣ್ಣುಗಳನ್ನು ಕೊಯ್ಯುವದಿಲ್ಲ.
ಲೂಕ 6:44 പര്യവേക്ഷണം ചെയ്യുക
ഭവനം
വേദപുസ്തകം
പദ്ധതികൾ
വീഡിയോകൾ