ಆದಿಕಾಂಡ 5

5
ಆದಾಮನ ವಂಶಾವಳಿ
(೧ ಪೂರ್ವ. 1:1-4)
1ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು. 2ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.
3ಆದಾಮನು 130 ವರ್ಷದವನಾದಾಗ ರೂಪದಲ್ಲಿ ತನ್ನಂತೆಯೇ ಇದ್ದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು. 4ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು. 5ಸತ್ತಾಗ ಅವನಿಗೆ 930 ವರ್ಷಗಳಾಗಿದ್ದವು.
6ಸೇತನು 105 ವರ್ಷದವನಾದಾಗ ಎನೋಷನನ್ನು ಪಡೆದನು. 7ಎನೋಷನು ಹುಟ್ಟಿದ ಮೇಲೆ ಅವನು 807 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು. 8ಸತ್ತಾಗ ಅವನಿಗೆ 912 ವರ್ಷಗಳಾಗಿದ್ದವು.
9ಎನೋಷನು 90 ವರ್ಷದವನಾದಾಗ ಕೇನಾನನ್ನು ಪಡೆದನು. 10ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು. 11ಸತ್ತಾಗ ಅವನಿಗೆ ಒಟ್ಟು 905 ವರ್ಷಗಳಾಗಿದ್ದವು.
12ಕೇನಾನನು 70 ವರ್ಷದವನಾದಾಗ ಮಹಲಲೇಲನನ್ನು ಪಡೆದನು. 13ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. 14ಸತ್ತಾಗ ಅವನಿಗೆ ಒಟ್ಟು 910 ವರ್ಷಗಳಾಗಿದ್ದವು.
15ಮಹಲಲೇಲನು 65 ವರ್ಷದವನಾದಾಗ ಯೆರೆದನನ್ನು ಪಡೆದನು. 16ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. 17ಸತ್ತಾಗ ಅವನಿಗೆ ಒಟ್ಟು 895 ವರ್ಷಗಳಾಗಿದ್ದುವು.
18ಯೆರೆದನು 162 ವರ್ಷದವನಾದಾಗ ಹನೋಕನನ್ನು ಪಡೆದನು. 19ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಬದುಕಿದನು. 20ಸತ್ತಾಗ ಅವನಿಗೆ ಒಟ್ಟು 962 ವರ್ಷಗಳಾಗಿದ್ದವು.
21ಹನೋಕನು 65 ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು. 22ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. 23ಅವನು ಬದುಕಿದ ಕಾಲವೆಲ್ಲ 365 ವರ್ಷಗಳು. 24ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.
25ಮೆತೂಷೆಲಹನು 187 ವರ್ಷದವನಾದಾಗ ಲೆಮೆಕನನ್ನು ಪಡೆದನು. 26ಲೆಮೆಕನು ಹುಟ್ಟಿದ ಮೇಲೆ 782 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. 27ಸತ್ತಾಗ ಅವನಿಗೆ ಒಟ್ಟು 969 ವರ್ಷಗಳಾಗಿದ್ದವು.
28ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು. 29ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ#5:29ಅಂದರೆ - “ನೆಮ್ಮದಿ". ಎಂದು ಹೆಸರಿಟ್ಟನು. 30ನೋಹನು ಹುಟ್ಟಿದ ಮೇಲೆ ಲೆಮೆಕನು 595 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು. 31ಸತ್ತಾಗ ಅವನಿಗೆ ಒಟ್ಟು 777 ವರ್ಷಗಳಾಗಿದ್ದವು. 32ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.

Terpilih Sekarang Ini:

ಆದಿಕಾಂಡ 5: KANCLBSI

Highlight

Kongsi

Salin

None

Ingin menyimpan sorotan merentas semua peranti anda? Mendaftar atau log masuk