1
ಲೂಕ 10:19
ಕನ್ನಡ ಸಮಕಾಲಿಕ ಅನುವಾದ
ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.
ႏွိုင္းယွဥ္
ಲೂಕ 10:19ရွာေဖြေလ့လာလိုက္ပါ။
2
ಲೂಕ 10:41-42
ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ, ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.
ಲೂಕ 10:41-42ရွာေဖြေလ့လာလိုက္ပါ။
3
ಲೂಕ 10:27
ಅದಕ್ಕೆ ಅವನು ಉತ್ತರವಾಗಿ, “ ‘ನೀನು ನಿನ್ನ ದೇವರಾದ ಕರ್ತದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು,’ ಮತ್ತು ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು,’” ಎಂದನು.
ಲೂಕ 10:27ရွာေဖြေလ့လာလိုက္ပါ။
4
ಲೂಕ 10:2
ಯೇಸು ಅವರಿಗೆ, “ಬೆಳೆಯೋ ಬಹಳವಾಗಿದೆ, ಕೆಲಸದವರೋ ಕೆಲವರು. ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ.
ಲೂಕ 10:2ရွာေဖြေလ့လာလိုက္ပါ။
5
ಲೂಕ 10:36-37
“ಈಗ ಆ ಕಳ್ಳರ ಕೈಗೆ ಸಿಕ್ಕಿಬಿದ್ದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಕೇಳಿದರು. ಅದಕ್ಕೆ ನಿಯಮ ಪಂಡಿತನು, “ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ನಿನ್ನ ನೆರೆಯವನು,” ಎಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆಯೇ ಮಾಡು,” ಎಂದು ಹೇಳಿದರು.
ಲೂಕ 10:36-37ရွာေဖြေလ့လာလိုက္ပါ။
6
ಲೂಕ 10:3
ಹೋಗಿರಿ! ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
ಲೂಕ 10:3ရွာေဖြေလ့လာလိုက္ပါ။
ပင္မစာမ်က္ႏွာ
က်မ္းစာ
အစီအစဥ္
ဗီဒီယို