1
ಲೂಕ 13:24
ಕನ್ನಡ ಸಮಕಾಲಿಕ ಅನುವಾದ
“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
ႏွိုင္းယွဥ္
ಲೂಕ 13:24ရွာေဖြေလ့လာလိုက္ပါ။
2
ಲೂಕ 13:11-12
ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, “ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ,” ಎಂದು ಹೇಳಿ
ಲೂಕ 13:11-12ရွာေဖြေလ့လာလိုက္ပါ။
3
ಲೂಕ 13:13
ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.
ಲೂಕ 13:13ရွာေဖြေလ့လာလိုက္ပါ။
4
ಲೂಕ 13:30
ಆಗ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.
ಲೂಕ 13:30ရွာေဖြေလ့လာလိုက္ပါ။
5
ಲೂಕ 13:25
ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.
ಲೂಕ 13:25ရွာေဖြေလ့လာလိုက္ပါ။
6
ಲೂಕ 13:5
ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.
ಲೂಕ 13:5ရွာေဖြေလ့လာလိုက္ပါ။
7
ಲೂಕ 13:27
“ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.
ಲೂಕ 13:27ရွာေဖြေလ့လာလိုက္ပါ။
8
ಲೂಕ 13:18-19
ಅನಂತರ ಯೇಸು, “ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? ನಾನು ಯಾವುದಕ್ಕೆ ಅದನ್ನು ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.
ಲೂಕ 13:18-19ရွာေဖြေလ့လာလိုက္ပါ။
ပင္မစာမ်က္ႏွာ
က်မ္းစာ
အစီအစဥ္
ဗီဒီယို