ಲೂಕ 20:46-47
ಲೂಕ 20:46-47 KSB
“ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಬಯಸುವವರಾಗಿದ್ದಾರೆ; ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.