ಲೂಕ 7:7-9
ಲೂಕ 7:7-9 KSB
ನಾನು ನಿಮ್ಮ ಬಳಿಗೆ ಬರುವುದಕ್ಕೆ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು. ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು. ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು.