ಆದಿ 5

5
ಆದಾಮನ ವಂಶಾವಳಿ
1ಪೂರ್ವ 1:1-4
1ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು. 2ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.
3ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು. 4ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು. 5ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.
6ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು. 7ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು. 8ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು.
9ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು. 10ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು. 11ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು.
12ಕೇನಾನನು ಎಪ್ಪತ್ತು ವರ್ಷದವನಾದಾಗ, #5:12 ಮಹಲಲೇಲ ಎಂದರೆ ದೇವರಿಗೆ ಸ್ತೋತ್ರ.ಮಹಲಲೇಲನನ್ನು ಪಡೆದನು. 13ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು. 14ಕೇನಾನನು ಒಟ್ಟು ಒಂಭೈನೂರ ಹತ್ತು ವರ್ಷ ಬದುಕಿ ನಂತರ ಸತ್ತನು.
15ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು. 16ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು.
17ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು.
18ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು. 19ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು. 20ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು.
21ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು. 22ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು. 23ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು. 24ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.
25ಮೆತೂಷೆಲಹನು ನೂರ ಎಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು. 26ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು. 27ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು.
28ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು. 29ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು. 30ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು. 31ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು.
32ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.

Marker

Del

Kopier

None

Vil du ha høydepunktene lagret på alle enhetene dine? Registrer deg eller logg på