ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.