1
ಅಪೊಸ್ತಲರ ಕಾರ್ಯಗಳು 2:38
ಪರಿಶುದ್ದ ಬೈಬಲ್
ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.
Сравнить
Изучить ಅಪೊಸ್ತಲರ ಕಾರ್ಯಗಳು 2:38
2
ಅಪೊಸ್ತಲರ ಕಾರ್ಯಗಳು 2:42
ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
Изучить ಅಪೊಸ್ತಲರ ಕಾರ್ಯಗಳು 2:42
3
ಅಪೊಸ್ತಲರ ಕಾರ್ಯಗಳು 2:4
ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.
Изучить ಅಪೊಸ್ತಲರ ಕಾರ್ಯಗಳು 2:4
4
ಅಪೊಸ್ತಲರ ಕಾರ್ಯಗಳು 2:2-4
ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು. ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.
Изучить ಅಪೊಸ್ತಲರ ಕಾರ್ಯಗಳು 2:2-4
5
ಅಪೊಸ್ತಲರ ಕಾರ್ಯಗಳು 2:46-47
ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು. ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.
Изучить ಅಪೊಸ್ತಲರ ಕಾರ್ಯಗಳು 2:46-47
6
ಅಪೊಸ್ತಲರ ಕಾರ್ಯಗಳು 2:17
‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.
Изучить ಅಪೊಸ್ತಲರ ಕಾರ್ಯಗಳು 2:17
7
ಅಪೊಸ್ತಲರ ಕಾರ್ಯಗಳು 2:44-45
ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು. ತಮ್ಮ ಜಮೀನನ್ನು ಮತ್ತು ತಾವು ಹೊಂದಿದ್ದ ವಸ್ತುಗಳನ್ನು ಮಾರಿ, ಬಂದ ಹಣವನ್ನೆಲ್ಲಾ ಕೊರತೆಯಲ್ಲಿದ್ದವರಿಗೆ ಹಂಚಿಕೊಡುತ್ತಿದ್ದರು
Изучить ಅಪೊಸ್ತಲರ ಕಾರ್ಯಗಳು 2:44-45
8
ಅಪೊಸ್ತಲರ ಕಾರ್ಯಗಳು 2:21
ಪ್ರಭುವಿನ ಹೆಸರನ್ನು ಹೇಳಿಕೊಳ್ಳುವವರಿಗೆಲ್ಲ ರಕ್ಷಣೆ ಆಗುವುದು.’
Изучить ಅಪೊಸ್ತಲರ ಕಾರ್ಯಗಳು 2:21
9
ಅಪೊಸ್ತಲರ ಕಾರ್ಯಗಳು 2:20
ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತೆ ಕೆಂಪಾಗುವನು, ಆಗ ಪ್ರಭುವಿನ ಗಂಭೀರವಾದ ಮಹಾದಿನವು ಬರುವುದು
Изучить ಅಪೊಸ್ತಲರ ಕಾರ್ಯಗಳು 2:20
Домой
Библия
Планы
Видео