1
ಲೂಕನ ಸುವಾರ್ತೆ 15:20
ಪರಿಶುದ್ದ ಬೈಬಲ್
ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.
Сравнить
Изучить ಲೂಕನ ಸುವಾರ್ತೆ 15:20
2
ಲೂಕನ ಸುವಾರ್ತೆ 15:24
ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.
Изучить ಲೂಕನ ಸುವಾರ್ತೆ 15:24
3
ಲೂಕನ ಸುವಾರ್ತೆ 15:7
ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.
Изучить ಲೂಕನ ಸುವಾರ್ತೆ 15:7
4
ಲೂಕನ ಸುವಾರ್ತೆ 15:18
ನಾನು ಇಲ್ಲಿಂದ ನನ್ನ ತಂದೆಯ ಬಳಿಗೆ ಹೊರಟುಹೋಗುತ್ತೇನೆ. ನಾನು ನನ್ನ ತಂದೆಗೆ, ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪ ಮಾಡಿದ್ದೇನೆ.
Изучить ಲೂಕನ ಸುವಾರ್ತೆ 15:18
5
ಲೂಕನ ಸುವಾರ್ತೆ 15:21
ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
Изучить ಲೂಕನ ಸುವಾರ್ತೆ 15:21
6
ಲೂಕನ ಸುವಾರ್ತೆ 15:4
“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು.
Изучить ಲೂಕನ ಸುವಾರ್ತೆ 15:4
Домой
Библия
Планы
Видео