1
ಲೂಕನ ಸುವಾರ್ತೆ 16:10
ಪರಿಶುದ್ದ ಬೈಬಲ್
ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿರುವವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿರುವನು. ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು.
Сравнить
Изучить ಲೂಕನ ಸುವಾರ್ತೆ 16:10
2
ಲೂಕನ ಸುವಾರ್ತೆ 16:13
“ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”
Изучить ಲೂಕನ ಸುವಾರ್ತೆ 16:13
3
ಲೂಕನ ಸುವಾರ್ತೆ 16:11-12
ಲೌಕಿಕ ಐಶ್ವರ್ಯಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ಪರಲೋಕದ ಐಶ್ವರ್ಯಗಳಲ್ಲಿಯೂ ನೀವು ನಂಬಿಗಸ್ತರಾಗಿರುವುದಿಲ್ಲ. ಮತ್ತೊಬ್ಬನ ಸ್ವತ್ತುಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ನಿಮ್ಮ ಸ್ವಂತ ಸ್ವತ್ತುಗಳನ್ನೇ ನಿಮಗೆ ಯಾರೂ ಕೊಡುವುದಿಲ್ಲ.
Изучить ಲೂಕನ ಸುವಾರ್ತೆ 16:11-12
4
ಲೂಕನ ಸುವಾರ್ತೆ 16:31
“ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು.
Изучить ಲೂಕನ ಸುವಾರ್ತೆ 16:31
5
ಲೂಕನ ಸುವಾರ್ತೆ 16:18
“ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”
Изучить ಲೂಕನ ಸುವಾರ್ತೆ 16:18
Главная
Библия
Планы
Видео