“ಮನುಷ್ಯಕುಮಾರನು ತಿರುಗಿ ಬರುವ ದಿವಸಗಳಲ್ಲಿ ಈ ಲೋಕದ ಸ್ಥಿತಿಯು ನೋಹನ ಕಾಲದ ಸ್ಥಿತಿಯಂತೆಯೇ ಇರುವುದು. ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು.