1
ಲೂಕನ ಸುವಾರ್ತೆ 21:36
ಪರಿಶುದ್ದ ಬೈಬಲ್
ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”
Сравнить
Изучить ಲೂಕನ ಸುವಾರ್ತೆ 21:36
2
ಲೂಕನ ಸುವಾರ್ತೆ 21:34
“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.
Изучить ಲೂಕನ ಸುವಾರ್ತೆ 21:34
3
ಲೂಕನ ಸುವಾರ್ತೆ 21:19
ನೀವು ನಿಮ್ಮ ನಂಬಿಕೆಯಲ್ಲಿ ದೃಢವಾಗಿದ್ದರೆ ನಿಮ್ಮನ್ನು ರಕ್ಷಿಸಿಕೊಳ್ಳುವಿರಿ.
Изучить ಲೂಕನ ಸುವಾರ್ತೆ 21:19
4
ಲೂಕನ ಸುವಾರ್ತೆ 21:15
ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.
Изучить ಲೂಕನ ಸುವಾರ್ತೆ 21:15
5
ಲೂಕನ ಸುವಾರ್ತೆ 21:33
ಭೂಮ್ಯಾಕಾಶಗಳು ನಾಶವಾಗುವವು; ಆದರೆ ನಾನು ಹೇಳಿದ ಮಾತುಗಳು ಎಂದಿಗೂ ನಾಶವಾಗುವುದಿಲ್ಲ!
Изучить ಲೂಕನ ಸುವಾರ್ತೆ 21:33
6
ಲೂಕನ ಸುವಾರ್ತೆ 21:25-27
“ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು. ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು. ಆಗ ಮನುಷ್ಯಕುಮಾರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ನೋಡುವರು.
Изучить ಲೂಕನ ಸುವಾರ್ತೆ 21:25-27
7
ಲೂಕನ ಸುವಾರ್ತೆ 21:17
ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು.
Изучить ಲೂಕನ ಸುವಾರ್ತೆ 21:17
8
ಲೂಕನ ಸುವಾರ್ತೆ 21:11
ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು.
Изучить ಲೂಕನ ಸುವಾರ್ತೆ 21:11
9
ಲೂಕನ ಸುವಾರ್ತೆ 21:9-10
ಯುದ್ಧಗಳ ಬಗ್ಗೆ ಮತ್ತು ದಂಗೆಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು. ಬಳಿಕ ಯೇಸು ಅವರಿಗೆ, “ಜನಾಂಗಗಳು ಬೇರೆ ಜನಾಂಗಗಳಿಗೆ ವಿರುದ್ಧವಾಗಿ ಹೋರಾಡುವವು. ರಾಜ್ಯಗಳು ಬೇರೆ ರಾಜ್ಯಗಳಿಗೆ ವಿರುದ್ಧವಾಗಿ ಹೋರಾಡುವವು.
Изучить ಲೂಕನ ಸುವಾರ್ತೆ 21:9-10
10
ಲೂಕನ ಸುವಾರ್ತೆ 21:25-26
“ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು. ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು.
Изучить ಲೂಕನ ಸುವಾರ್ತೆ 21:25-26
11
ಲೂಕನ ಸುವಾರ್ತೆ 21:10
ಬಳಿಕ ಯೇಸು ಅವರಿಗೆ, “ಜನಾಂಗಗಳು ಬೇರೆ ಜನಾಂಗಗಳಿಗೆ ವಿರುದ್ಧವಾಗಿ ಹೋರಾಡುವವು. ರಾಜ್ಯಗಳು ಬೇರೆ ರಾಜ್ಯಗಳಿಗೆ ವಿರುದ್ಧವಾಗಿ ಹೋರಾಡುವವು.
Изучить ಲೂಕನ ಸುವಾರ್ತೆ 21:10
12
ಲೂಕನ ಸುವಾರ್ತೆ 21:8
ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.
Изучить ಲೂಕನ ಸುವಾರ್ತೆ 21:8
Главная
Библия
Планы
Видео